ಬೆಂಗಳೂರು: ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತ ರಾಜ್ಯ ಸರ್ಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ( Namma Clinic ) ಆರಂಭಿಸಲಾಗಿತ್ತು. ಈ ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾಧ್ಯಂತ ವಿಸ್ತರಣೆ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ.
Yashaswini Yojana : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಈ ಕುರಿತಂತೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ), ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿರುವಂತ ನಮ್ಮ ಕ್ಲಿನಿಕ್ ಕೇಂದ್ರಗಳನ್ನು ರಾಜ್ಯಾಧ್ಯಂತ ಶೀಘ್ರದಲ್ಲೇ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
438 ನನ್ನೂರ ನಮ್ಮ ಕ್ಲಿನಿಕ್ ಯೋಜನೆಗೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು. ನಗರಸಭೆ ಹಾಗೂ ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್ಥಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕೆಳಗಿರುವ ಹಾಗೂ ಕೊಳಚೆ ಪ್ರದೇಶದಲ್ಲಿ ವಾಸಿಸುವ ಜನರ ಆರೋಗ್ಯದ ಹಿತರಕ್ಷಣೆ ದೃಷ್ಟಿಯಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಮಹಿಳೆಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಗರ ಆರೋಗ್ಯ ಕೇಂದ್ರಗಳಲ್ಲಿ 128 ಮಹಿಳಾ ಸ್ವಾಸ್ತ್ಯ ಕೇಂದ್ರವನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
New Rule From 1st November : ಗ್ರಾಹಕರೇ ಗಮನಿಸಿ : ನವೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು