ಹುಬ್ಬಳ್ಳಿ : ಕಲ್ಯಾಣ ಕರ್ನಾಟಕದ ಜನತೆಗೆ ಸಿಎಂ ಬೊಮ್ಮಾಯಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.
BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ಉಚಿತ ಅಕ್ಕಿ : ಸಿದ್ದರಾಮಯ್ಯ ಘೋಷಣೆ
ಹುಬ್ಬಳ್ಳಿ ತಾಲೂಕಿನ ಬೈರಿದೇವರಕೋಪ್ಪದ ರೇಣುಕಾ ನಗರದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಆರೋಗ್ಯ ಯೋಜನೆ ನಮ್ಮ ಕ್ಲೀನಿಕ್ ಉದ್ಘಾಟಿಸಿ ಮತ್ತು ವಿವಿಧ ಜಿಲ್ಲೆಗಳಲ್ಲಿನ ನಮ್ಮ ಕ್ಲೀನಿಕ್ಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದರು.
ಹಿಂದುಳಿದ, ಆಸ್ಪರೇಶನ ತಾಲೂಕುಗಳನ್ನು ಗುರುತಿಸಿ, ಆರೋಗ್ಯ ಸೇವೆಗಳ ಸುಧಾರಣೆಗೆ ಕ್ರಮವಹಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಸಕ್ಕರೆ ಖಾಯಿಲೆ ಇರುವವರಿಗೆ ಡಯಾಲಿಸಸ್ ಮಾಡುವುದನ್ನು ಪ್ರಸ್ತುತ 30 ಸಾವಿರದಷ್ಟು ಇರುವದನ್ನು 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಹೊಸದಾಗಿ 12 ಕೆಮೊಥೆರಪಿ ಕೇಂದ್ರಗಳನ್ನು ರಾಜ್ಯದಲ್ಲಿ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಡವರಿಗೆ, ಜನಸಾಮಾನ್ಯರಿಗೆ ಅತ್ಯಂತ ಅವಶ್ಯಕತೆ ಇರುವ ಆರೋಗ್ಯ ಕಾರ್ಯಕ್ರಮ ಇದು. ಶಹರದಲ್ಲಿನ ಬಡವರ ಆರೋಗ್ಯ ದೃಷ್ಟಿಯಿಂದ ಮಹತ್ವದ್ದಾಗಿದೆ. ಬಡವರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಖಾಸಗಿ ಆಸ್ಪತ್ರೆಗಳು ಹೆಚ್ಚು ದರ ವಿಧಿಸುವುದರಿಂದ ತೊಂದರೆ ಆಗುತ್ತದೆ. ನಮ್ಮ ಸರಕಾರ ಸ್ಪಂದನಾಶೀಲವಾಗಿದೆ. ರಾಜ್ಯದ ತುಂಬ ನಗರದ ಜನಸಾಮಾನ್ಯರಿಗಾಗಿ, ಬಡವರಿಗಾಗಿ ನಮ್ಮ ಕ್ಲೀನಿಕ್ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಡತನ ಮತ್ತು ಅನಾರೋಗ್ಯ ಎರಡು ಅಭಿವೃದ್ಧಿಯ ಶತ್ರುಗಳು. ಬಡತನದಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚುತ್ತದೆ. ಯಾವುದೇ ತಾರತಮ್ಯವಿಲ್ಲದೇ ಎಲ್ಲರಿಗೂ ಉತ್ತಮ ಚಿಕಿತ್ಸೆ, ಉಚಿತ ಔಷಧೋಪಚಾರ ದೊರೆಯುವಂತೆ ರಾಜ್ಯ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಅವರು ಹೇಳಿದರು.
ಪ್ರಸಕ್ತ ಸಾಲಿನ ರಾಜ್ಯ ಬಜೆಟ್ದಲ್ಲಿ 10 ಸಾವಿರ ಕೋಟಿ ಆರೋಗ್ಯ ಕ್ಷೇತ್ರಕ್ಕೆ ಅನುದಾನ ಮೀಸಲಿಟ್ಟು, ಆರೋಗ್ಯ ಕ್ಷೇತ್ರದ ಸುಧಾರಣೆಗೆ ಒತ್ತು ನೀಡಲಾಗಿದೆ. ಮತ್ತು ಪ್ರಸಕ್ತ ಸಾಲಿನಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರ್ಕಾರದ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಜನವರಿಯಿಂದ 60 ವರ್ಷ ದಾಟಿದ ಪ್ರತಿಯೊಬ್ಬರಿಗೂ ಉಚಿತವಾಗಿ ಕಣ್ಣು ತಪಾಸಣೆ, ಚಿಕಿತ್ಸೆ ಉಚಿತ ಕನ್ನಡಕ ವಿತರಣೆ ಕ್ರಮವಹಿಸಲಾಗುವುದು. 500 ಕೋಟಿ ವೆಚ್ಚದಲ್ಲಿ ಹುಟ್ಟು ಕಿವುಡರಿಗೆ ಶ್ರವಣಸಲಕರಣೆ ವಿತರಿಸಲಾಗುವುದು. ರೈತರಿಗೆ ಯಶಸ್ವಿನಿ ಯೋಜನೆ ಮುಂದುವರಿಕೆಗೆ ಕ್ರಮವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸುಮಾರು 350 (ಬೆಡ್) ಹಾಸಿಗೆ ಸೌಲಭ್ಯ ಇರುವ ರೂ.250 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆಗೆ ಕಿಮ್ಸ್ ಆವರಣದಲ್ಲಿ ಬರುವ ಜನವರಿಯಲ್ಲಿ ಶಂಕುಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನವನಗರ ಕ್ಯಾನ್ಸರ್ ಆಸ್ಪತ್ರೆಗೆ ಹೊಸ ಉಪಕರಣ ಖರೀದಿಗೆ 10 ಕೋಟಿ ಅನುದಾನ ನೀಡಲಾಗಿದೆ. ನವನಗರ ಕ್ಯಾನ್ಸರ್ ಆಸ್ಪತ್ರೆ ಬಡವರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದರು.
ಸಮುದಾಯ ಆಸ್ಪತ್ರೆಗಳ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಮುಂಬರುವ ದಿನಗಳಲ್ಲಿ ಬಡವರಿಗೆ, ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಹೊಸ ಸಂಶೋಧನೆಗಳ ಲಾಭ ಸಿಗುವಂತೆ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಆರೋಗ್ಯ ಕ್ಷೇತ್ರದ ನೂತನ ಸಂಶೋಧನೆಗಳಿಗೆ ಪೆÇ್ರೀತ್ಸಾಹ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸುವಲ್ಲಿ ರಾಜ್ಯ ಸರಕಾರ ಹೆಚ್ಚು ಕಾಳಜಿವಹಿಸಿದೆ. ಪ್ರತಿ ಜಿಲ್ಲೆಯ ಎಲ್ಲ ಮಕ್ಕಳ ಆರೋಗ್ಯ ತಪಾಸಣೆ ಆಗಬೇಕು. ಜಿಲ್ಲೆಯ ಮಕ್ಕಳ ಚಿಕಿತ್ಸೆ, ಆರೋಗ್ಯ ದಾಖಲೆ ಆಗಬೇಕು. ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚುವಂತೆ ಮಾಡಬೇಕು ಎಂದು ಮುಖ್ಯಮಂತಿ ಬಸವರಾಜ ಬೊಮ್ಮಾಯಿ ಹೇಳಿದರು.