ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಪೌರಸಂಸ್ಥೆಗಳ ವ್ಯಾಪ್ತಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಮಾಡುವ ದಾಹುಮುಕ್ತ ಕರ್ನಾಟಕ ಅಮೃತ್ ಯೋಜನೆಗೆ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಾಹುಮುಕ್ತ ಕರ್ನಾಟಕ ಯೋಜನೆ ಜಾರಿಗೆ ತರಲಾಗುತ್ತಿದ್ದು, ಒಟ್ಟಾರೆ 7,820 ಕೋಟಿ ರೂ.ಗಳ ಯೋಜನೆ ಇದಾಗಿದೆ. ಈ ಯೋಜನೆ ಮೂಲಕ ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಕುಡಿಯುವ ನೀರು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ನವೆಂಬರ್ 11 ರಂದು ಕೆಂಪೇಗೌಡ ಪ್ರತಿಮೆಯ ಉದ್ಧಾಟನೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಅಂದೇ ಅಮೃತ್-2 ಅಡಿ ದಾಹಮುಕ್ತ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ. 50 ರಷ್ಟು ಪಾಲು ನೀಡಲಿದ್ದು, ಉಳಿದ ಶೇ. 50 ರಷ್ಟು ಪಾಲನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.
ಮೊರ್ಬಿ ಸೇತುವೆ ಕುಸಿತ ದುರಂತ: ಐದು ದಿನಗಳ ನಂತ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಅಂತ್ಯ