ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಜನರ ಆರೋಗ್ಯ ಸುರಕ್ಷತೆಯ ಗ್ರಾಮಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಯೋಜನೆಗೆ ಶೀಘ್ರವೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Rain in Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ಕಳೆದ ವರ್ಷ ರಾಜ್ಯದ 14 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದೀಗ ಉಳಿದ 17 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಈ ಯೋಜನೆಗೆ ಅನುದಾನ ಒದಗಿಸಲಿದ್,ದು ಯೋಜನೆಗೆ ಜಿಲ್ಲಾ ಪಂಚಾಯಿತಿಗಳ ಡಿಡಿಒಗಳ ಖಾತೆಗೆ ಖಜಾನೆ-2 ತಂತ್ರಾಂಶದ ಮೂಲಕ ಅನುದಾನ ಬಿಡುಗಡೆ ಮಾಡಲಾಗುತ್ತದೆ.
ಈ ಯೋಜನೆ ಮೂಲಕ ಜನರ ಆರೋಗ್ಯ ತಪಾಸಣೆ ಮಾಡಲು ಆಶಾ ಕಾರ್ಯಕರ್ತೆಯರಿಗೆ ಪೂರಕ ತರಬೇತಿ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗೂ ಒಂದೊಂದು ಆರೋಗ್ಯ ಕಿಟ್ ಗಳನ್ನು ವಿತರಿಸಲಾಗುತ್ತದೆ. ಈ ವರ್ಷ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಹಾವೇರಿ, ಕೊಡಗು, ಕೋಲಾರ, ರಾಮನಗರ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ 3161 ಗ್ರಾಮಪಂಚಾಯಿತಿಗಳಲ್ಲಿ ಯೋಜನೆಯನ್ನು ವಿಸ್ತರಣೆ ಮಾಡಲಾಗುತ್ತಿದೆ.