ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕದ ಗ್ರಾಮೀಣ ಅಭಿವೃದ್ಧಿಗಾಗಿ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಇಲಾಖೆಯು 1,046 ಕೋಟಿ ರೂ. ಬಿಡುಗಡೆ ಮಾಡಿದೆ.
ಕೇಂದ್ರ ಹಣಕಾಸು ಇಲಾಖೆಯು ದೇಶದ ವಿವಿಧ ರಾಜ್ಯಗಳಿಗೆ ಒಟ್ಟು 4,190 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕಕ್ಕೆ 1,046 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. 15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಅನುದಾನ ಬಿಡುಗಡೆ ಮಾಡಲಾಗಿದೆ.
BREAKING NEWS : ಮಾಜಿ ಶಾಸಕ ಎಸ್.ಕೆ. ಬಸವರಾಜನ್ ವಿರುದ್ಧ ಅತ್ಯಾಚಾರ ಆರೋಪ : ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ
ಈ ಹಣದ ಒಟ್ಟು ಮೌಲ್ಯದಲ್ಲ ಶೇ 60ರಷ್ಟು ಪ್ರಮಾಣವನ್ನು ಗ್ರಾಮೀಣಾ ಪ್ರದೇಶಗಳ ಸ್ವಚ್ಛತೆ, ಬಯಲು ಶೌಚಾಲಯ ಮುಕ್ತ ಯೋಜನೆಗಳ ಅನುಷ್ಠಾನಕ್ಕೆ ಬಳಸಬೇಕು. ಕುಡಿಯುವ ನೀರು, ಮಳೆ ನೀರು ಕೊಯ್ಲು ಮತ್ತು ನೀರು ಮರುಬಳಕೆಯ ಸೌಕರ್ಯ ಕಲ್ಪಿಸಬೇಕು ಎಂದು ಸೂಚನೆ ನೀಡಿದೆ.