ಬೆಂಗಳೂರು : ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಸಿಹಿಸುದ್ದಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಒಂಟಿ ಮನೆ ಯೋಜನೆ ಆರಂಭಿಸಲಾಗುತ್ತಿದ್ದು, ಶೀಘ್ರದಲ್ಲಿ ಅರ್ಜಿ ಆಹ್ವಾನಿಸಿ ನಗರದ 2 ಸಾವಿರ ಮಂದಿಗೆ ತಲಾ 5 ಲಕ್ಷ ರೂ. ಧನಸಹಾಯ ನೀಡಲಾಗುವುದು ಎಂದು ವಿಶೇಷ ಆಯುಕ್ತ ಡಾ.ರಾಮ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
BIGG NEWS : ರಾಜ್ಯದ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ : ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ!
ಈ ಕುರಿತು ಮಾಹಿತಿ ನೀಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒಂಟಿ ಮನೆ ಯೋಜನೆಗೆ ಮತ್ತೆ ಚಾಲನೆ ನೀಡುವಂತೆ ಸೂಚಿಸಿದೆ.ಯೋಜನೆಗೆ 100 ಕೋಟಿ ರೂ. ಮೀಸಲಿಡಲಾಗಿದ್ದು, 2 ಸಾವಿರ ಫಲಾನುಭವಿಗಳಿಗೆ ತಲಾ 5 ಲಕ್ಷ ರೂ.ನಂತೆ ಧನಸಹಾಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
20/30 ನಿವೇಶನ ಹೊಂದಿರುವವರು ಸಹಾಯಧನಕ್ಕೆ ಅರ್ಜಿ ಸಲ್ಲಿಸಿದರೆ ಅರ್ಜಿ ಹಾಗೂ ನಿವೇಶನವನ್ನು ಪರಿಶೀಲಿಸಿ ಸಹಾಯಧನ ನೀಡಲು ಬಿಬಿಎಂಪಿ ನಿರ್ಧರಿಸಿದ್ದು, ಶೀಘ್ರವೇ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.
BREAKING NEWS : ದಾವಣಗೆರೆಯಲ್ಲಿ ಕರೆಂಟ್ ಶಾಕ್ ನಿಂದ ಸ್ಥಳದಲ್ಲೇ ದಂಪತಿ ದುರ್ಮರಣ