ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ ಬಂದಿದ್ದು, ನಕಲಿ ದಾಖಲೆ ಸೃಷ್ಟಿಸಿ ಅನುಕಂಪದ ಆಧಾರದ ಮೇಲೆ ಬೆಸ್ಕಾಂ ಇಲಾಖೆಯಲ್ಲಿ ಉದ್ಯೋಗ ಪಡಿದಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.
BIGG NEWS : ಸರ್ಕಾರಿ ನೌಕರರ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ : ದಿನಾಂಕ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ
ಚಿತ್ರದುರ್ಗದಲ್ಲಿ ಅನುಕಂಪ ಆಧಾರದ ಮೇಲೆ ನಕಲಿ ದಾಖಲೆ ಸೃಷ್ಟಿಸಿ ಬೆಸ್ಕಾಂನಲ್ಲಿ ಉದ್ಯೋಗ ಪಡೆದಿದ್ದ ಆರೋಪದಡಿ ಬೆಸ್ಕಾಂ ಇಂಜಿನಿಯರ್ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ.
ಚಿತ್ರದುರ್ಗ ಕೋಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ನಕಲಿ ದಾಖಲೆ ಸೃಷ್ಟಿ 6 ಜನ ಹುದ್ದೆ ಪಡೆದಿದ್ದ ಪ್ರಕರಣವನ್ನು ಬಯಲು ಮಾಡಿದ್ದಾರೆ. ಎಲ್.ರವಿ, ಪ್ರೇಮ್ ಕುಮಾರ್, ಶಾಂತಮಲ್ಲಪ್ಪ, ವಿರೇಶ್, ರಘು ಕಿರಣ್, ಹರೀಶ್, ಶಿವಪ್ರಸಾದ್ ನನ್ನು ಪೊಲೀಸರು ಬಂಧಿಸಿದ್ದಾರೆ.