ಬೆಂಗಳೂರು : ಭಾರೀ ಮಳೆಗೆ ತತ್ತರಿಸಿರುವ ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ನವೆಂಬರ್ವರೆಗೂ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ಸಾ.ರಾ.ಮಹೇಶ್! ಕಾರಣ ಏನು ಗೊತ್ತಾ
ಈ ವರ್ಷ ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆಯಿದ್ದು, ಸೆಪ್ಟೆಂಬರ್ ತಿಂಗಳು 211 ಮಿ.ಮೀ ವಾಡಿಕೆ ಮಳೆಯಾಗಿದೆ. ಆದ್ರೆ ಈ ತಿಂಗಳು ಸೆ.1 ರಿಂದ ಸೆ. 7ರವರೆಗೆ 227 ಮಿ.ಮೀ ಮಳೆ ದಾಖಲಾಗಿದೆ. ಇನ್ನೂ 2 ತಿಂಗಳು ಮಳೆ ಮುಂದುವರಿದರೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಆರ್ಭಟ ಇರಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲೂ ಮಳೆ ಮುಂದುವರೆಯಲಿದೆ. ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಕೊಡಗು, ರಾಮನಗರ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.