ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡದಿರಲು ಎನ್ ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ ಎನ್ನಲಾಗಿದೆ.
BREAKING NEWS: ಎದುರಾಳಿಯ ಒಂದೇ ಒಂದು ಏಟಿಗೆ ಹೊರಟೇ ಹೊಯ್ತು ಕಿಕ್ ಬಾಕ್ಸರ್ ಪ್ರಾಣ….! ಎಲ್ಲಿ ಗೊತ್ತಾ
ಶಿಕ್ಷಣ ಇಲಾಖೆಯ ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ನೀಡಲಾಗುತ್ತಿಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ ನೀಡದಿರಲು ಎನ್ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ.
ಮೊಟ್ಟೆ ಹಾಗೂ ಮಾಂಸದಿಂದ ಅನೇಕ ರೋಗಗಳು ಬರುತ್ತವೆ. ಹೀಗಾಗಿ ಸಾತ್ವಿಕ ಆಹಾರ ಪದ್ಧತಿಯನ್ನು ಅನುಸರಿಸಬೇಕು ಹೀಗಾಗಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಬಾರದು ಎಂದು ಎನ್ಇಪಿ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಹೇಳಲಾಗುತ್ತಿದೆ.
BREAKING NEWS : ಭಾರೀ ಮಳೆಗೆ ಪುಣೆಯ ಕೊಂಡ್ವಾ ಪ್ರದೇಶದಲ್ಲಿ ಮನೆಯ ಗೋಡೆ ಕುಸಿತ, 11 ಮಂದಿಯ ರಕ್ಷಣೆ