ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮುಂದಿನ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಪ್ರೀತ್ಸೆ ಅಂತ ಶಾಲೆಯಲ್ಲಿ ಹಿಂದೆ ಬಿದ್ದ ಪಾಗಲ್ ಪ್ರೇಮಿ: ಮನೆಗೆ ಬಂದು ತಾಳಿ ಕಟ್ಟಿದೆ…! ಮುಂದೆನಾಯ್ತು ಗೊತ್ತಾ?
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಕರಾವಳಿಯ ಹಲವು ಕಡೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ 13, 14, 15ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ.
ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತಮ್ಮನಿಂದ ಮೊಬೈಲ್ ಪಾಸ್ವರ್ಡ್ ಚೇಂಜ್ : ಮನನೊಂದು ನೇಣಿಗೆ ಶರಣಾದ ಅಕ್ಕ