ಧಾರವಾಡ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ನಂತರದ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬ್ರೈಲ್‍ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರ ಸಾಧನಗಳನ್ನು ಒಳಗೊಂಡ (ರೂ.25,000/-ಗಳ ಮೊತ್ತದ) ಬ್ರೈಲ್‍ಕಿಟ್‍ಗಳನ್ನು ವಿತರಿಸಲಾಗುವುದು.

BIGG NEWS: ಟಿ. ನರಸೀಪುರದಲ್ಲಿ ಹೆಚ್ಚಾದ ಚಿರತೆ ಹಾವಳಿ; ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡುವಂತೆ ಡಿಸಿ ಆದೇಶ

ಧಾರವಾಡ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಹಾಗೂ ನಂತರದ ವ್ಯಾಸಂಗ ಮಾಡುತ್ತಿರುವ ಶೇಕಡಾ.40 ಅಥವಾ ಅದಕ್ಕಿಂತ ಹೆಚ್ಚಿನ ವಿಕಲಚೇತನ ಪ್ರಮಾಣವನ್ನು ಹೊಂದಿರುವ ಅಂಧ ವಿದ್ಯಾರ್ಥಿಗಳಿಂದ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಡಿಸೆಂಬರ್ 25 ರೊಳಗಾಗಿ ಆಯಾ ತಾಲೂಕಾ ಪಂಚಾಯತ ಕಚೇರಿಯಲ್ಲಿರುವ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ಇವರಲ್ಲಿ ಸಲ್ಲಿಸಬೇಕು.

ಅರ್ಜಿ ಫಾರಂ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIGG NEWS : ʻನನ್ನ ಆರೋಗ್ಯ ವಿಚಾರಿಸಿದ್ದಕ್ಕಾಗಿ ಪ್ರಧಾನಿ ಮೋದಿಗೆ ನಾನು ಕೃತಜ್ಞನಾಗಿದ್ದೇನೆ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

Share.
Exit mobile version