ಬಳ್ಳಾರಿ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹಾರ್ ನವೋದಯ ವಿದ್ಯಾಲಯದಲ್ಲಿ 2023ನೇ ಸಾಲಿಗೆ ನಡೆಯಲಿರುವ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ 01-05-2011ರಿಂದ 30-04-2013ರೊಳಗೆ ಜನಿಸಿದ ಮಕ್ಕಳು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http.navodaya.gov.in ಅಥವಾ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
BIGG NEWS : ಕರ್ನಾಟಕಕ್ಕೂ ಕಾಲಿಟ್ಟ ಕೊರೊನಾ ರೂಪಾಂತರಿ ತಳಿ `ಎಕ್ಸ್ ಬಿಬಿ 1.5’