ಬಳ್ಳಾರಿ : ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಲಾಗಿದ್ದು, 2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರದ ಖಾಯಂ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಂಘವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಎಂ.ಶಿವಾಜಿರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಆನ್‍ಲೈನ್ ವೆಬ್‍ಸೈಟ್ https://bit.ly/ksgeaprathibapuraskara2022  ನಲ್ಲಿ ಸಲ್ಲಿಸಬೇಕು.

ಷರತ್ತುಗಳು: ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿದಾರರ ತಂದೆ-ತಾಯಿ/ಪೆÇೀಷಕರು ಕಡ್ಡಾಯವಾಗಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕಾಗಿದ್ದು, ವೇತನ ಬಟವಾಡೆ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ತಾಲ್ಲೂಕು ಶಾಖೆ ಅಧ್ಯಕ್ಷರಿಂದ ಪಡೆದ ಸೇವಾ ಧೃಡೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸುವುದು.

ವಿಧ್ಯಾರ್ಥಿಯ ಪೆÇೀಷಕರು ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿಧ್ಯಾ ಸಂಸ್ಥೆಯ ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ದೃಡೀಕರಣ ಪತ್ರವಿಲ್ಲದೇ ಸಲ್ಲಿಸಲ್ಪಡುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.15 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.080-223554783/84, ಮೊ.99021 9535813, 95357 47350ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Share.
Exit mobile version