ಬೆಂಗಳೂರು : ವಿರೋಧ ಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆಯಲ್ಲೂ ಮತಾಂತರ ನಿಷೇಧ ಮಸೂದೆ ಅಂಗೀಕಾರಗೊಂಡಿದೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿದೇಯಕ 2022 ವಿಧಾನ ಪರಿಷತ್ ನಲ್ಲಿ ಅಂಗೀಕಾರ ಪಡೆದುಕೊಂಡಿತ್ತು.
Good News : ರಾಜ್ಯ ಸರ್ಕಾರದಿಂದ ಬಡಜನತೆಗೆ ಮತ್ತೊಂದು ಸಿಹಿಸುದ್ದಿ : 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!
ಕಾಂಗ್ರೆಸ್ ಸಭಾತ್ಯಾಗದ ನಡುವೆಯೇ ಪರಿಷತ್ನಲ್ಲಿ ತಿದ್ದುಪಡಿಯೊಂದಿಗೆ ಮಸೂದೆ ಅಂಗೀಕರಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡಿಸಿದ್ರು. ಸ್ವಇಚ್ಛೆ ಮತಾಂತರಕ್ಕೆ ಅಡ್ಡಿಯಿಲ್ಲ. ಬಲವಂತದ ಮತಾಂತರಕ್ಕೆ ಮಾತ್ರ ನಿರ್ಬಂಧವಿದೆ. ಈ ವಿಧೇಯಕದಲ್ಲಿ ದುರುದ್ದೇಶ, ದುರುಪಯೋಗಕ್ಕೆ ಅವಕಾಶಗಳಿಲ್ಲ. ಸ್ವಇಚ್ಛೆಯಿಂದ ಮತಾಂತರಗೊಳ್ಳುವ ಸ್ವಾತಂತ್ರ್ಯ ಹಕ್ಕು ಇದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮತಾಂತರ ನಿಷೇಧ ತಿದ್ದುಪಡಿ ಬಿಲ್ ಸಂಬಂಧ ಚರ್ಚೆ ನಡೆಯುತ್ತಿದ್ದ ವೇಳೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಆಕ್ಷೇಪ ವ್ಯಕ್ತಪಡಿಸಿದರು. ಇದು ಸಂವಿಧಾನ ವಿರೋಧಿ ಮಸೂದೆ, ದುರುದ್ದೇಶದಿಂದ ಕೂಡಿದೆ. ಕಾನೂನಾತ್ಮಕವಾಗಿ ಹೋರಾಡಿದರೆ ಮಸೂದೆಗೆ ತಡೆ ಸಿಗಲಿದೆ ಎಂದರು. ತಜ್ಞರ ಜೊತೆ ಚರ್ಚಿಸಿ ವಿಧೇಯಕ ತರಲಾಗಿದೆ. ಆಡಳಿ
ಏನಿದು ಮತಾಂತರ ವಿರೋಧಿ ಮಸೂದೆ ಅಂಗೀಕಾರ
1) ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ಇನ್ಮುಂದೆ ನಿಷೇಧವಿದೆ.
2)ವ್ಯಕ್ತಿಯು ಆತನ ನಿಕಟಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ. ಈ ಮೂಲಕ ಘರ್ ವಾಪ್ಸಿಗೆ ಅವಕಾಶ ಕಲ್ಪಿಸಲಾಗಿದೆ.
3)ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ಐಆರ್ ದಾಖಲಿಸುವ ಅವಕಾಶ ಕಾಯ್ದೆಯಲ್ಲಿ ಕಲ್ಪಿಸಲಾಗಿದೆ.
4) ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್ಸಿ, ಎಸ್ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದ್ದು, ಅಷ್ಟೇ ಅಲ್ಲದೆ 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.