ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 7 ವಿಶ್ವವಿದ್ಯಾಲಯಗಳ ಸ್ಥಾಪಿಸುವ ಸಂಬಂಧ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ(ತಿದ್ದುಪಡಿ) ವಿಧೇಯಕವನ್ನು ಧ್ವನಿಮತದ ಮೂಲಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ ಸದನದಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆಯನ್ನು ವಿವರಿಸಿ ಅಂಗೀಕಾರ ಪಡೆದುಕೊಂಡರು. ಬೀದರ್, ಹಾವೇರಿ, ಕೊಡಗು, ಚಾಮರಾಜನಗರ, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ಹೊಸ ವಿಶ್ವವಿದ್ಯಾಲಯಗಳನ್ನು ರಚಿಸಲು ಪ್ರಸ್ತಾಪಿಸಿದ್ದಾರೆ. ಅಲ್ಲದೆ, ಈಗಿರುವ ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಯನ್ನು ಇಡೀ ಮಂಡ್ಯ ಜಿಲ್ಲೆಯ ವ್ಯಾಪ್ತಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಶಾಕಿಂಗ್ ನ್ಯೂಸ್: ಆಸ್ಪತ್ರೆಯ ಶವಾಗಾರದಲ್ಲಿದ್ದ ಯುವಕರ ಶವ ಕಚ್ಚಿ ತಿಂದ ಇಲಿಗಳು
ಹೊಸ ವಿವಿಗಳ ಸ್ಥಾಪನೆಯ ಸಂಬಂಧ ಪ್ರತಿ ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂ.ನಂತೆ ವಾರ್ಷಿಕವಾಗಿ 14 ಕೋಟಿ ರೂ. ನೀಡಲಾಗುತ್ತದೆ. ಚಾಮರಾಜನಗರ ವಿವಿಯಲ್ಲಿ 18, ಹಾಸನ ವಿವಿಯಲ್ಲಿ 36, ಹಾವೇರಿ ವಿವಿಯಲ್ಲಿ 40, ಬೀದರ್ ವಿವಿಯಲ್ಲಿ 140, ಕೊಡುಗು ವಿವಿಯಲ್ಲಿ24, ಕೊಪ್ಪಳ ವಿವಿಯಲ್ಲಿ 40, ಬಾಗಲಕೋಟೆ ವಿವಿಯಲ್ಲಿ 71 ಕಾಲೇಜುಗಳು ಬರಲಿವೆ.