ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.
ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ವಕ್ಫ್ ವಿವಾದ, ಪಡಿತರ ಚೀಟಿ ಗೊಂದಲ, ಮುಡಾ ಹಗರಣ ಸೇರಿ ಸಾಲು ಸಾಲು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳು ವಿಪಕ್ಷಗಳು ಸಜ್ಜಾಗಿವೆ.
ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಚಾಟಿ ಬೀಸಲು ವಿಪಕ್ಷಗಳು ತಯಾರಿ ನಡೆಸಿವೆ. ಹಾಗೇ ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳಾದ ಮೂಲಭೂತ ಸೌಕರ್ಯದ ವಿಚಾರಕ್ಕೆ ಈ ಬಾರಿಯಾದರೂ ಪರಿಹಾರ ಸಿಗುತ್ತಾ ಕಾದು ನೋಡಬೇಕಿದೆ.