ಬಳ್ಳಾರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಸೌಲಭ್ಯ:ಗರಿಷ್ಠ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು-ಇದರಲ್ಲಿ ಗರಿಷ್ಟ ಶೇ.15ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.1ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಬಯಸುವವರು ವರ್ಗಗಳ ಪ್ರವರ್ಗ 1, 2ಎ, 3ಎ, ಮತ್ತು 3ಬಿ ಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಉಪ್ಪಾರ, ಅಂಬಿ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯಕ, ಕಾಡುಗೊಲ್ಲ. ಹಟ್ಟಿ ಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳನ್ನು ಹೊರತುಪಡಿಸಿ).
ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98ಸಾವಿರ ಹಾಗೂ ನಗರ ಪ್ರದೇಶದವರಿಗೆ ರೂ.1ಲಕ್ಷ 20ಸಾವಿರಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸುವಿಧಾ ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆ.24ರಂದು ಸಂಜೆ 05ರೊಳಗೆ ಸುವಿಧಾ ತಂತ್ರಾಂಶದ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಮೇಲ್ಕಂಡ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು https://suvidha.karnataka.gov.in ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ನಿಗಮದ ವೆಬ್ ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 08022374832 ಹಾಗೂ ಜಿಲ್ಲಾ ಕಚೇರಿಯ ದೂ.08392-267038ಗೆ ಸಂಪರ್ಕಿಸಬಹುದು.