ಬೆಂಗಳೂರು : ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಸಂಪೂರ್ಣ ಭಿಕ್ಷಾಟನೆ ನಿರ್ಮೂಲನೆ ಮಾಡಲು ಭಿಕ್ಷಾಟನೆ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
BIGG NEWS : ಶಿವಮೊಗ್ಗದಲ್ಲಿ ರೌಡಿಶೀಟರ್ ಹಂದಿ ಅಣ್ಣಿ ಕೊಲೆ ಪ್ರಕರಣ : ಪೊಲೀಸರಿಗೆ ಶರಣಾದ ಆರೋಪಿಗಳು
ಭಿಕ್ಷಾಟನೆ ನಿರ್ಮೂಲನೆ ಕುರಿತಂತೆ ಗೃಹ ಸಚಿವ ಅರಗಜ್ಞಾನೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜೊತೆಗೆ ಮಹತ್ವದ ಸಭೆ ಬಳಿಕ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿ ಸಂಪೂರ್ಣವಾಗಿ ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು : ಡಾ. ಟಿ.ಎಸ್. ನಾಗಾಭರಣ
ಭಿಕ್ಷಾಟನೆ ಮಾಫಿಯಾ ನಿಯಂತ್ರಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸಿ, ಬಾಲಗೃಹ, ಸರ್ಕಾರೇತರ ಸಂಸ್ಥೆಗಳು, ವಸತಿ ಮಂದಿಗಳಲ್ಲಿ ಪುನವರ್ಸತಿ ಕಲ್ಪಿಸಲು ನಿರ್ಧರಿಸಲಾಗಿದೆ. ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಇನ್ನು ಭಿಕ್ಷಾಟನೆ ನಿಯಂತ್ರಿಸಲು ಬೆಂಗಳೂರಿನಲ್ಲಿ 8 ಪೊಲೀಸ್ ವಿಭಾಗಗಳಲ್ಲಿ ತಂಡಗಳನ್ನು ರಚಿಸಿ ಕಾರ್ಯಯೋಜನೆ ಸಿದ್ಧಪಡಿಸಲಾಗಿದೆ. ಮಕ್ಕಳನ್ನು ಭಿಕ್ಷಾಟನೆಗಾಗಿ ಬೀದಿಗೆ ಬಿಡುವವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮಾರಾಟದ ವೇಳೆ ತನ್ನನ್ನು ಸಾಕಿ ಸಲಹಿದ ಮಾಲೀಕನನ್ನು ಅಪ್ಪಿ ಮೇಕೆ ಗೋಳಾಟ.. ಹೃದಯಸ್ಪರ್ಶಿ Video Viral