ಬೆಳಗಾವಿ : ಇಂದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಡಿಸೆಂಬರ್ 22 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಎರಡು ವರ್ಷದಿಂದ ಹೋರಾಟ ಮಾಡಿದ್ದೇವೆ. ಇಂದು ಅಧಿವೇಶನದಲ್ಲಿ ಘೋಷಣೆ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇಂದು ಘೋಷಣೆ ಮಾಡಿದ್ರೆ ವಿಜಯೋತ್ಸವ ಆಚರಿಸುತ್ತೇವೆ. ಇಲ್ಲವಾದರೆ ಡಿಸೆಂಬರ್ 22 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.
ಇಂದು ಸಂಜೆ ಸವದತ್ತಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಅಷ್ಟರೊಳಗೆ ಮೀಸಲಾತಿ ಕುರಿತು ಸರ್ಕಾರದಿಂದ ಸ್ಪಷ್ಟನೆ ಸಿಗಲಿದೆ. ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.