ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿನ ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

HAIR CARE TIPS: ಚಳಿಗಾಲದಲ್ಲಿ ತಲೆ ಕೂದಲು ಉದುರುವುದನ್ನು ತಪ್ಪಿಸಲು ಮನೆಯಲ್ಲೇ ಮಾಡಿ ಈ ಕೆಲಸ

ಅಡುಗೆ ಎಣ್ಣೆ, ಕಾಫಿ, ಟೀಪುಡಿ, ಎಲ್ ಪಿಜಿ ಗ್ಯಾಸ್ ದರ ಹೆಚ್ಚಳ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ ಮಾಡಲು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ನವೆಂಬರ್ 18 ರಂದು ಹೋಟೆಲ್ ಮಾಲೀಕರ ಸಂಘ ಸಭೆ ನಡೆಸಲಿದ್ದು, ಸಭೆಯಲ್ಲಿ ಹೋಟೆಲ್ ಊಟ, ತಿಂಡಿ ದರ ಹೆಚ್ಚಳದ ಕುರಿತು ಅಂತಿ ನಿರ್ಧಾರ ತೆಗೆದುಕೊಳ್ಳಲಿದೆ.

ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10 ರಷ್ಟು ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೋಟೆಲ್ ಊಟ, ಉಪಾಹಾರ, ಕಾಫಿ-ಟೀ ದರ ಶೇಕಡ 10 ರಷ್ಟು ಹೆಚ್ಚಳ ಮಾಡಲು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.

BREAKING NEWS : ಹುಬ್ಬಳ್ಳಿಯಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : 30 ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

Share.
Exit mobile version