ಬಾಗಲಕೋಟೆ : ಭವಾನಿ ರೇವಣ್ಣ ಅವರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಿಂತ ನೀರಲ್ಲ. ಹರಿಯುವ ನದಿ ಇದ್ದಂತೆ. ಹರಿಯುವ ನದಿಗೆ ಹೊಸ ನೀರು ಬಂದರೆ ಸ್ವಾಗತ ಮಾಡುತ್ತೇವೆ. ಹೀಗೆಯೇ ಭವಾನಿ ರೇವಣ್ಣ ಜೆಡಿಎಸ್ ಪಕ್ಷ ಬಿಟ್ಟು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
ಈ ನಡುವೆ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರವಾಗಿ ಭವಾನಿ ರೇವಣ್ಣ ಅವರ ಅಭಿಮಾನಿಗಳು ಹಾಸನ ವಿಧಾನಸಭೆ ಕ್ಷೇತ್ರದಿಂದ ಭವಾನಿಗೆ ರೇವಣ್ಣಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ.
SHOCKING NEWS: ʻಗರ್ಭಿಣಿʼಯಾಗಲು ಸಹಾಯ ಮಾಡುವ ನೆಪದಲ್ಲಿ ಮಹಿಳೆ ಮೇಲೆ ಸಾಧು ಅತ್ಯಾಚಾರ