ಬೆಂಗಳೂರು : ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದ್ದು, ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಅವರು ಯಡಿಯೂರಪ್ಪ ಅವರಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಜಾಮೀನಿನ ಮೇಲೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ.
ಮೂಲಸೌಕರ್ಯ ಕಾರಿಡಾರ್ ಸ್ಥಾಪಿಸಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಂಡ 17.18 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣ ಇದಾಗಿದೆ. ಯಡಿಯೂರಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
BIGG NEWS : ಕೋಲಾರದಲ್ಲಿ ಮತ್ತೆ ʻಮುಂದಿನ ಸಿಎಂ ಸಿದ್ದರಾಮಯ್ಯʼ ಘೋಷಣೆ ಕೂಗಿದ ಕಾರ್ಯಕರ್ತರು
BIG NEWS : ಮೆಕ್ಸಿಕೋದಲ್ಲಿ ಪ್ಯಾರಾಚೂಟ್‌ಗೆ ತಗುಲಿದ ಬೆಂಕಿ; ಮೇಲಿಂದ ಜಿಗಿದು ಇಬ್ಬರು ಸಾವು | WATCH VIDEO