ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಪಿಯುಸಿ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕೆಲವು ಲೋಪ ದೋಷಗಳು ಉಂಟಾದ ಹಿನ್ನೆಲೆಯಲ್ಲಿ ಜುಲೈ 7 ರಂದು ನಡೆಸಿದ್ದ ಕಡ್ಡಾಯ ವರ್ಗಾವಣೆಯನ್ನು ರದ್ದುಪಡಿಸಿ ಮರು ವರ್ಗಾವಣೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಸಂಬಂಧ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾ ಉಪನಿರ್ದೇಶಕರು ತಮ್ಮ ಅಧೀನದಲ್ಲಿರುವ ಪದವಿ ಪೂರ್ವ ಕಾಲೇಜುಗಳಲ್ಲಿ ಮಂಜೂರಾದ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ಜುಲೈ 21 ರೊಳಗೆ ಸಲ್ಲಿಸುವಂತೆ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ.