ಬೆಂಗಳೂರು : ಮಳೆ, ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಜಾತಿ ಆಧಾರದಲ್ಲಿ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ನಡೆಯಲ್ಲ : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್
ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿ ಕೆಲ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಆಗಲಿದೆ. ಶುಕ್ರವಾರದಿಂದ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.