ಧಾರವಾಡ : ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಯಂಗೊಳಿಸಲು ನೇಮಕಾತಿ ನಿಯಮಾವಳಿಗಳಲ್ಲಿ ಅವಕಾಶವಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಹೈಅಲರ್ಟ್: ಇಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಿಟಿ ರೌಂಡ್ಸ್
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಯಂಗೊಳಿಸಲು ನೇಮಕಾತಿ ನಿಯಮಾವಳಿಗಳಲ್ಲಿ ಅವಕಾಶವಿಲ್ಲ ರಾಷ್ಟ್ರೀಯ ಆರೋಗ್ಯ ಅಭಿಯಾನ ಇರುವವರೆಗೆ ಮಾತ್ರ ಆವರ ಕೆಲಸವಿರುತ್ತದೆ. ಈ ಕುರಿತು ಅವರ ಒಪ್ಪಂದ ಪತ್ರದಲ್ಲಿಯೇ ಇದೆ. ಕೋವಿಡ್ ತೀವೃವಾದಾಗ 10 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳನ್ನು ರಾಜ್ಯ ಸರ್ಕಾರಿ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈಗಲೂ ಅಗತ್ಯಬಿದ್ದರೆ ಮತ್ತೆ ಈ ಕುರಿತು ಕ್ರಮವಹಿಸಲಾಗುವುದು. ಆರೋಗ್ಯ ಇಲಾಖೆಯಲ್ಲಿ ವಿವಿಧ ರೀತಿ ವೈದ್ಯ ಹಾಗೂ ವೈದ್ಯಯೇತರ ಸಿಬ್ಬಂದಿಗಳ ಖಾಯಂ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು.
ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಎಲ್ಲ ರೀತಿಯ ಆರ್ಥಿಕ ಚಟುವಟಿಕೆಗಳನ್ನು ನಿರ್ಭಂಧಿಸಲಾಗಿತ್ತು. ಈಗ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದರಿಂದ ಆರ್ಥಿಕ, ವಾಣಿಜ್ಯ, ಚುಟವಟಿಕೆಗಳು ಪುನರಾರಂಭಗೊಂಡು, ಚೈತನ್ಯ ಪಡೆದಿವೆ. ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಆರ್ಥಿಕ, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸುವ ಅಥವಾ ತಡೆಯುವ ಯೋಚನೆ ಸರ್ಕಾರದ ಮುಂದೆ ಇಲ್ಲಾ ಎಂದು ಹೇಳಿದ್ದಾರೆ.
ಎಲ್ಲರೂ ಕಡ್ಡಾಯವಾಗಿ ಮೂರು ಡೋಸ್ ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು ಮತ್ತು ಒಳಾಂಗಣದಲ್ಲಿರುವ ಆಸನಗಳಿಗೆ ಮಾತ್ರ ಅವಕಾಶ ನೀಡಿ, ಸುರಕ್ಷಿತ, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಶಾಲಾ, ಕಾಲೇಜು, ಬಸ್, ರೈಲು, ಸಂತೆ, ಜಾತ್ರೆ ಇತ್ಯಾದಿಗಳಲ್ಲಿ ತಪ್ಪದೇ ಮಾಸ್ಕ್ ಧರಿಸುವುದನ್ನು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಆಯಾ ಜಿಲ್ಲೆಯಲ್ಲಿ ಅಲ್ಲಿನ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ ಮತ್ತು ಜಿಲ್ಲಾ ಪೊಲೀಸ್ ವರಿಷ್ಠರು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಿದರು.