ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಮತ್ತೆ ನಿರಾಸೆ ಮೂಡಿಸಿದ್ದು, ಮತ್ತಷ್ಟು ದಿನ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಇದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ನಿನ್ನೆ ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜೊತೆಗೆ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಕುರಿತಂತೆ ಚರ್ಚೆ ನಡೆದಿದೆ. ಆದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಮತ್ತೆ ನಿರಾಸೆ ಮೂಡಿಸಿದೆ.
ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸಚಿವ ಸಂಪುಟ ವಿಸ್ತರಣೆಗೆ ನಾವೇ ನಿರ್ಧರಿಸಿ ಹೇಳುತ್ತೇವೆ. ಈ ಮೂಲಕ ಸಂಪುಟ ವಿಸ್ತರಣೆ ಮತ್ತಷ್ಟು ದಿನ ವಿಳಂಬವಾಗಲಿದೆ. ಹೀಗಾಗಿ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.
ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮನೆ ನಿರ್ಮಾಣ ಸಹಾಯಧನ ದುಪ್ಪಟ್ಟು ಹೆಚ್ಚಳ