ಚಿತ್ರದುರ್ಗ : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆ ಜೈಲುಪಾಲಾಗಿರುವ ಮುರುಘಾ ಶ್ರೀಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮುರುಘಾ ಶ್ರೀ ವಿರುದ್ಧ ಇದೀಗ ಪೋಲೀಸರು ಕೋರ್ಟ್ ಗೆ ಎರಡನೇ ಫೋಕ್ಸೋ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಚಿತ್ರದುರ್ಗದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದೂರಿನ ತನಿಖೆ ನಡೆಸಿ ಸುಧೀರ್ಘ ದೋಷಾರೋಪ ಪಟ್ಟಿಸಲ್ಲಿಸಿದ್ದಾರೆ. ಮೊದಲನೇ ಪ್ರಕರಣದ ಬಳಿಕ ಇಬ್ಬರು ಬಾಲಕಿಯರು ಆರೋಪದ ಹಿನ್ನೆಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಲಾಗಿತ್ತು.
ಮುರುಘಾ ಶ್ರೀ ಸೇರಿದಂತೆ ಐವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದು, ಸ್ನಾನ ಗೃಹಕ್ಕೆ ಕರೆದು ಅತ್ಯಾಚಾರ ಮಾಡುತ್ತಾ ಇದ್ದರು. ಖಾಸಗಿ ಕೊಠಡಿಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಲಾಗ್ತಾ ಇತ್ತು ಎಂದು ಆರೋಪಿಸಿದ್ದ ಸಂತ್ರಸ್ತೆಯರು ಪ್ರಕರಣಕ್ಕೆ ಪೂರಕ ಸಾಕ್ಷ್ಯ ಒದಗಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ಚಿತ್ರದುರ್ಗ ಪೊಲೀಸರು ಈಗ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ದೋಷಾರೋಪ ಪಟ್ಟಿಯನ್ನು ಚಿತ್ರದುರ್ಗದ 2 ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.