ಕಾರವಾರ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್ ಮೆಸ್ತಾ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪರೇಶ್ ಮೇಸ್ತಾನದ್ದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಹೊನ್ನಾವರದ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ.
BIGG NEWS : ಅನುಕಂಪದ ಆಧಾರದಲ್ಲಿ ನೀಡುವ ಸರ್ಕಾರಿ ಉದ್ಯೋಗ ಹಕ್ಕಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಪರೇಶ್ ಮೇಸ್ತಾ ಸಾವಿನಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆ ಸೇರಿ ವಿವಿಧ ವರದಿಗಳು ಮೇಸ್ತಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆಂದು ಹೇಳುತ್ತಿವೆ ಎಂದು ಕೋರ್ಟ್ ಗೆ ಸಿಬಿಐ ಸಲ್ಲಿಸಿದ ವರದಿಯಲ್ಲಿ ಉಲ್ಲೇಖವಾಗಿದೆ. ಈ ವರದಿ ಪರಿಶೀಲಿಸಿದ ಕೋರ್ಟ್ ತೀರ್ಪನ್ನು ನವೆಂಬರ್ 16 ಕ್ಕೆ ಮುಂದೂಡಿದೆ.
2017 ರ ಡಿಸೆಂಬರ್ 6 ರಂದು ಹೊನ್ನಾವರದಲ್ಲಿ ನಡೆದ ಗಲಭೆಯೊಂದು ಕೋಮುಸಂಘರ್ಷಕ್ಕೆ ತಿರುಗಿ ಘಟನಾ ಸ್ಥಳದಲ್ಲಿ ಪರೇಶ್ ಮೆಸ್ತಾ ಕಾಣೆಯಾಗಿದ್ದ. ಬಳಿಕ ಡಿಸೆಂಬರ್ 8 ರಂದು ನಗರದ ಶನಿ ದೇವಸ್ಥಾನದ ಹಿಂಭಾಗ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಮೃತದೇಹ ಪತ್ತೆಯಾಗಿತ್ತು.