ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಮಠದ ಶ್ರೀಗಳ ಬಂಧನದ ಬೆನ್ನಲ್ಲೇ ಮಗಳು ಕಾಣುತ್ತಿಲ್ಲ ಎಂದು ದೃಷ್ಟಿದೋಷವುಳ್ಳ ತಂದೆಯೊಬ್ಬರು ಮಠಕ್ಕೆ ಬಂದು ಅಳಲು ತೋಡಿಕೊಂಡಿದ್ದ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಮುರುಘಾ ಶ್ರೀಗಳ ಬಂಧನದ ಬಳಿಕ ಮಠಕ್ಕೆ ಬಂದ ವ್ಯಕ್ತಿಯೊಬ್ಬರು ತಮ್ಮ ಮಗಳು ನಾಪತ್ತೆಯಾಗಿದ್ದಳು. ಮಗಳನ್ನು ಹುಡುಕಿ ಕೊಡದಿದ್ದರೆ ಸುಪ್ರೀಂಕೋರ್ಟ್ ಕದ ತಟ್ಟುವುದಾಗಿ ಹೇಳಿದ್ದರು. ಆದರೆ ದೃಷ್ಟಿದೋಷವುಳ್ಳ ವ್ಯಕ್ತಿಯ ಮಗಳು ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.
ಬಾಲಕಿ ಈ ಹಿಂದೆ ಮುರುಘಾ ಮಠದ ಅಕ್ಕಮಹಾದೇವಿ ಹಾಸ್ಟೆಲ್ನಲ್ಲಿ ವಾಸವಾಗಿದ್ದಳು. ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದ ಮುನಿಸ್ವಾಮಿ ಮತ್ತು ಅವರ ಪತ್ನಿ ಶಂಕರಿಯಮ್ಮ ಅವರು ತಮ್ಮ ಮಗಳನ್ನು ಹುಡುಕಲು ಗೌರಿಬಿದನೂರು ತಾಲೂಕಿನಿಂದ ಚಿತ್ರದುರ್ಗಕ್ಕೆ ಬಂದಿದ್ದರು.