ಬಳ್ಳಾರಿ : ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 ಆಗಿರುತ್ತದೆ. ಅಭ್ಯರ್ಥಿಗಳು ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂದು ಪೋರ್ಟಲ್ https;//sevasindu.karnataka.gov.in ಮೂಲಕ ಸಲ್ಲಿಸಬೇಕು. ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.
BIGG NEWS : ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ನೀರು ಸೇವನೆಗಾಗಿ 3 ಬಾರಿ `ವಾಟರ್ ಬೆಲ್’ ಬಾರಿಸಲು ಸೂಚನೆ
ಷರತ್ತುಗಳು: ಅಭ್ಯರ್ಥಿಯು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಯು ಮುಸ್ಲಿಂ, ಜೈನ್, ಕ್ರಿಶ್ಚಿಯಾನ್ ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಸದರಿ ಕೊರ್ಸ್ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ (ಗರಿಷ್ಠ 2 ವರ್ಷ) ಅನುದಾನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು National Council for teacher Education ಹಾಗೂ Department of State Education Research and Training ಇದರಡಿ ಮಾನ್ಯತೆ ಪಡೆದ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಡುತ್ತಿರಬೇಕು. ಪೋಷಕರ ವಾರ್ಷಿಕ ಆದಾಯ ಗರಿಷ್ಠ ರೂ.6ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಬಿ.ಎಡ್ ಹಾಗೂ ಡಿ.ಎಡ್ ಕೋರ್ಸ್ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು. ಹಿಂದಿನ ಸಾಲಿನಲ್ಲಿ ಕನಿಷ್ಠ ಶೇ.50ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಹೆಲ್ಪ್ಲೈನ್ ನಂ:8277799990ಗೆ ಸಂಪರ್ಕಿಸಬಹುದಾಗಿದೆ.
BIGG NEWS : ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ನೀರು ಸೇವನೆಗಾಗಿ 3 ಬಾರಿ `ವಾಟರ್ ಬೆಲ್’ ಬಾರಿಸಲು ಸೂಚನೆ