ನವದೆಹಲಿ : ರಾಜ್ಯದ ಬೆಟ್ಟ ಕುರುಬ ಸಮುದಾಯಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕರ್ನಾಟಕದ ಮೈಸೂರು, ಚಾಮರಾಜನಗರ, ಕೊಡಗು ಸುತ್ತಲಿನ ಪ್ರದೇಶಗಳಲ್ಲಿ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಶುಕ್ರವಾರ ಮಂಡಿಸಿದೆ.
BIGG NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ : ಇಂದು ಕಲಬುರಗಿ ʼಕಾಂಗ್ರೆಸ್ ಕಲ್ಯಾಣ ಕ್ರಾಂತಿ ಸಮಾವೇಶʼ
ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) ಆದೇಶ, 1950 ರಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳ ಮೂಲಕ ತಮಿಳುನಾಡು, ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಛತ್ತೀಸ್ ಗಢದ ನಾಲ್ಕು ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳ ಪಟ್ಟಿಯನ್ನು ಮಾರ್ಪಡಿಸುವ ನಾಲ್ಕು ಮಸೂದೆಗಳನ್ನು ಕೇಂದ್ರ ಸರ್ಕಾರವು ಡಿಸೆಂಬರ್ 9 ರಂದು ಲೋಕಸಭೆಯಲ್ಲಿ ಮಂಡಿಸಿತು.
BIGG NEWS : `ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ಯ ಸದಸ್ಯತ್ವ ನೋಂದಣಿಗೆ ಸೂಚನೆ
ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಕೆಳಮನೆಯಲ್ಲಿ ದಿನದ ಕಲಾಪದ ಮೊದಲಾರ್ಧದಲ್ಲಿ ಈ ಮಸೂದೆಗಳನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. ಹೀಗಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆ ಅಂಗೀಕಾರವಾದ ಬಳಿಕ ಕಾಯ್ದೆಯಾಗಿ ಬದಲಾಗಲಿದೆ.