ಬೆಳಗಾವಿ : ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಜಾತಿಯ ಮೀಸಲಾತಿಯನ್ನು ಹೆಚ್ಚಿಸುವ ವಿಧೇಯಕಕ್ಕೆ ವಿಧಾನಪರಿಷತ್ ನಲ್ಲೂ ಅಂಗೀಕಾರಗೊಂಡಿದೆ. ಇದರೊಂದಿಗೆ ವಿಧಾನಮಂಡಲದ ಎರಡೂ ಸದನದಲ್ಲಿ ಮಸೂದೆಗೆ ಸಮ್ಮತಿ ಸಿಕ್ಕಂತಾಗಿದೆ.
BREAKING NEWS : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
ಪರಿಶಿಷ್ಟ ಜಾತಿಯ ಮೀಸಲನ್ನು ಶೇ. 15 ರಿಂದ ಶೇ. 17 ಕ್ಕೆ ಪರಿಶಿಷ್ಟ ಪಂಗಡದ ಮೀಸಲನ್ನು ಶೇ. 3 ರಿಂದ ಶೇ.7 ಕ್ಕೆ ಹೆಚ್ಚಳ ಸಂಬಂಧ ಕರ್ನಾಟಕ ಅನುಸೂಚಿತ ಜಾತಿಗಳುಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ 2022 ಅನ್ನು ವಿಧಾನಪರಿಷತ್ ನಲ್ಲಿ ಸುದೀರ್ಘ ಚರ್ಚೆ ಬಳಿಕ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ನಾಗಮೋಹನ್ ದಾಸ್ ವರದಿ ಆಧರಿಸಿ ಪರಿಶಿಷ್ಟ ಜಾತಿಗೆ ಶೇ. 15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ. 3 ರಿಂದ ಶೇ.7ಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
BREAKING NEWS: ಶ್ರೀಲಂಕಾ ವಿರುದ್ಧದ ತವರಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ | IND vs SL