ನವದೆಹಲಿ: ಕಾಡುಕುರುಬರನ್ನು ಎಸ್ ಟಿ ಪಟ್ಟಿಗೆ ಸೇರಿಸುವ ಸಂಬಂಧದ ಬಹು ದಿನಗಳ ಬೇಡಿಕೆಗೆ ಈಗ ಜೀವ ಬಂದಿದೆ. ಇಂದು ಲೋಕಸಭೆಯಲ್ಲಿ ಕಾಡುಕುರುಬರನ್ನು ಎಸ್ ಟಿ ಪಟ್ಟಿಗೆ ಸೇರ್ಪಡೆಗೊಳಿಸುವಂತ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ.
ಲೋಕಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು, ಕಾಡುಕುರುಬರನ್ನು ಎಸ್ ಟಿ ಪಟ್ಟಿಗೆ ಸೇರ್ಪಡೆಗೊಳಿಸುವಂತ ಮಸೂಧೆಯನ್ನು ಮಂಡಿಸಿದರು. ಈ ಮೂಲಕ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಮಂಡನೆಯಾಗಿದೆ. ಇನ್ನೂ ಲೋಕಸಭೆಯಲ್ಲಿ ಮಸೂಧೆ ಮಂಡನೆಯ ಬಳಿಕ, ಚರ್ಚೆಯಲ್ಲಿ ಕಲಬುರ್ಗಿ ಸಂಸದ ಉಮೇಶ್ ಜಾಧವ್ ಭಾಗಿಯಾಗಿದ್ದು ಗಮನ ಸೆಳೆಯಿತು.
ಅಂದಹಾಗೇ ರಾಜ್ಯದಲ್ಲಿನ ಕಾಡು ಕುರುಬರನ್ನು ಎಸ್ ಟಿ ಮೀಸಲಾತಿಗೆ ಸೇರ್ಪಡೆಗೊಳಿಸುವಂತ ಬೇಡಿಕೆ ಹಲವು ದಿನಗಳಿಂದ ಕೇಳಿ ಬಂದಿತ್ತು. ಇದಕ್ಕಾಗಿ ಸಮುದಾಯದ ಅನೇಕರು ಪ್ರತಿಭಟನೆ, ಹೋರಾಟದ ಮೂಲಕ ಸರ್ಕಾರಕ್ಕೆ ಒತ್ತಡವನ್ನು ಹೇರಿದ್ದರು.