ಬೆಂಗಳೂರು : ರಾಜ್ಯದ ಎಲ್ಲ ಪಾಲಿಟೆಕ್ನಿಕ್ ಕಾಲೇಜು ಮತ್ತು ಕಚೇರಿಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ತಾಂತ್ರಿಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
BIGG NEWS : ಕೊಪ್ಪಳ ಜಿಲ್ಲೆಯಲ್ಲಿ ಘೋರ ದುರಂತ : ಹಳ್ಳದಲ್ಲಿ ಕೊಚ್ಚಿ ಹೋದ ನಾಲ್ವರು ಮಹಿಳೆಯರು!
ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ಪಾಲಿಟೆಕ್ನಿಕ್ ಕಾಲೇಜು ಮತ್ತು ಕಚೇರಿಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಪ್ರತಿದಿನ ಬಯೋಮೆಟ್ರಿಕ್ ಯಂತ್ರದಲ್ಲಿ ದಾಖಲಾಗುವ ಹಾಜರಾತಿ ಮಾಹಿತಿಯನ್ನು ಸಂಸ್ಥೆಯ ಜಾಲತಾಣದಲ್ಲಿ ಅದೇ ದಿನ ಪ್ರಚುರಪಡಿಸಬೇಕು ಎಂದು ಸೂಚಿಸಲಾಗಿದೆ.
ಇನ್ನು ಪಾಲಿಟೆಕ್ನಿಕ್ ಸಿಬ್ಬಂದಿಗಳ ಬಯೋಮೆಟ್ರಿಕ್ ಯಂತ್ರದಲ್ಲಿ ದಾಖಲಾಗುವ ಹಾಜರಾತಿಯ ಮಾಹಿತಿ ಆಧರಿಸಿ ವೇತನವನ್ನು ಪಾವತಿಸಲು ಕ್ರಮ ವಹಿಸಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.
ರೈಲ್ವೆ ನಿಲ್ದಾಣದಲ್ಲೇ ಇದ್ದಕ್ಕಿದ್ದಂತೆ ಹೃದಯಾಘಾತ: ಪತಿಯ ಬಾಯಿಗೆ ಉಸಿರು ತುಂಬಿ ಮರು ಜೀವ ನೀಡಿದ ಪತ್ನಿ!