ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳ ಸರ್ಕಾರಿ ಕಛೇರಿ ಕಛೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರದ ದಾಖಲಿಸುತ್ತಿರುವ ಕುರಿತು ಮಾಹಿತಿ ಒದಗಿಸುವ ಬಗ್ಗೆ ಮಾಹಿತಿಯನ್ನು ನೀಡುವಂತೆ ಅಧೀನ ಅಧಿಕಾರಿಗಳಿಂದ ಮಾಹಿತಿಯನ್ನು ಕೇಳಿದೆ. ಅದರಂತೆ.
ರಾಜ್ಯ ಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಛೇರಿಗಳು ಸೇರಿದಂತೆ ಅಧೀನಕ್ಕೊಳಪಡುವ ಎಲ್ಲಾ ನಿಗಮ / ಮಂಡಳಿ / ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ / ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿರುತ್ತದೆ. ಅದಾಗ್ಯೂ ಹಲವಾರು ಕಛೇರಿಯನ್ನೊಳಗೊಂಡಂತೆ ಅಧೀನ ಸಂಸ್ಥೆಗಳಲ್ಲಿ ಪ್ರಸ್ತುತದವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿವೆ. ಈ ನಿಟ್ಟಿನಲ್ಲಿ ತಮ್ಮ ಇಲಾಖೆಯ ಅಧೀನಕ್ಕೊಳಪಡುವ ಸರ್ಕಾರಿ ಕಛೇರಿಗಳು ಸೇರಿದಂತೆ ಅಧೀನ ಸಂಸ್ಥೆ/ನಿಗಮ/ಮಂಡಳಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಿರುವ ಬಗ್ಗೆ ದಿನಾಂಕ: 06/07/2024ರೊಳಗಾಗಿ ಈ ಕಛೇರಿಗೆ ವರದಿ ಕಳುಹಿಸುವಂತೆ ತಿಳಿಸಿದೆ.