ಬೆಂಗಳೂರು: ನೇಹಾ ಹತ್ಯೆ ಖಂಡಿಸಿ ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ನೀಡುವುದಾಗಿ ಬಿಜೆಪಿ ಎಂಎಎಲ್‌ಸಿ ರವಿಕುಮಾರ್ ಅವರು ಹೇಳಿದ್ದಾರೆ. ಅವರು ಇಂದು ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡುತ್ತ ತಿಳಿಸಿದರು. ಇನ್ನೂ ಇದೇ ವೇಳೆ ಅವರು ರಾಜ್ಯದಲ್ಲಿ ತಾಲಿಬಾನ್ ರೀತಿ ಅಡಳಿತವಿದ್ದು, ಯಾರೂ ಕೂಡ ನೆಮ್ಮದಿಯಿಂದ ಬದುಕುವುದಕ್ಕೆ ಸಾಧ್ಯವಾಗುತ್ತಿಲ್ಲ ಅಂಥ ಹೇಳಿದರು.
ಇನ್ನೂ ರಾಜ್ಯದಲ್ಲಿ ಎರಡು ಮೂರು ತಿಂಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮತಾಂಧರಿಗೆ ನೆರವು ನೀಡಲು ಕಾಂಗ್ರೆಸ್ ಸಿದ್ಧವಾಗಿದೆ. ರಾಜ್ಯದಲ್ಲಿ ತಾಲಿಬಾನ್ ಆಡಳಿತ ಇದೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.