ನವದೆಹಲಿ : ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ, ಇಂದು ಸಂಜೆ ಸಿಎಂ ಬೊಮ್ಮಾಯಿ ಜೊತೆಗೆ ಅಮಿತ್ ಶಾ ಮಹತ್ವದ ಸಭೆ ನಡೆಸಲಿದ್ದಾರೆ.
BREAKING NEWS: ಬಿಹಾರಕ್ಕೆ ವಿದೇಶದಲ್ಲಿ ಆಗಮಿಸದ ನಾಲ್ವರಿಗೆ ಕೋವಿಡ್ ದೃಢ: ದೇಶದಲ್ಲಿ ಹೆಚ್ಚಿದ ಬಿಎಫ್.7 ಆತಂಕ
ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಲಿದ್ದು, ಬಳಿಕ ರಾತ್ರಿ 8 ಗಂಟೆಗೆ ಅಮಿತ್ ಶಾ ಅವರ ನಿವಾಸದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಹಿರಿಯ ನಾಯಕ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಂಬಂಧ ಚರ್ಚೆ ನಡೆಯಲಿದೆ. ಜೊತೆಗೆ ಅಮಿತ್ ಶಾ ಅವರು ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
BREAKING NEWS: 5 ಖಾಸಗಿ ವಿವಿಗಳ ಸ್ಥಾಪನೆಗೆ ಅನುಮೋದನೆ ಬಗ್ಗೆ ಸಂಪುಟ ಸಭೆ ಚರ್ಚೆ; ಸಿಎಂ ಬೊಮ್ಮಾಯಿ