ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಇಂದಿನಿಂದ ಮತಗಟ್ಟೆ ಹಂತದಲ್ಲಿ ಬೂತ್ ವಿಜಯ ಅಭಿಯಾನ ಹಮ್ಮಿಕೊಂಡಿದೆ.
BIG NEWS: ಜಮ್ಮು & ಕಾಶ್ಮೀರದ ರಜೌರಿಯಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ, ಹಲವರಿಗೆ ಗಾಯ
ಇಂದಿನಿಂದ ಜನವರಿಗೆ 12 ರವರೆಗೆ ಬಿಜೆಪಿಯಿಂದ ಬೂತ್ ವಿಜಯ ಅಭಿಯಾನ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಪಕ್ಷದ ಎಲ್ಲಾ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳು, 1445 ಮಹಾಶಕ್ತಿ ಕೇಂದ್ರಗಳು ಹಾಗೂ 11,642 ಶಕ್ತಿಕೇಂದ್ರಗಳು, 58,186 ಬೂತ್ ಗಳ ಹಂತದಲ್ಲಿ ಬಿಜೆಪಿ ಬೂತ್ ವಿಜಯ ಅಭಿಯಾನ ನಡೆಯಲಿದೆ. ಅಭಿಯಾನದಲ್ಲಿ ಬೂತ್ ಸಮಿತಿಗಳ ಪರಿಶೀಲನೆ, ಪೇಜ್ ಪ್ರಮುಖರ ನಿಯುಕ್ತಿ, ಮತಗಟ್ಟೆಗಳಲ್ಲಿ ವಾಟ್ಸಪ್ ಗ್ರೂಪ್ ಗಳ ರಚನೆ, ಕಾರ್ಯಕರ್ತರ ಮನೆಗಳ ಮೇಲೆ ಧ್ವಜಾರೋಹಣ, ಮನ್ ಕಿ ಬಾತ್ ಕಾರ್ಯಕ್ರಮದ ಕುರಿತು ಹಾಗೂ 50 ಲಕ್ಷ ಮನೆಗಳ ಮೇಲೆ ಪಕ್ಷದ ಧ್ವಜ ಹಾರಿಸಲಾಗುವುದು ಎಂದು ತಿಳಿದುಬಂದಿದೆ.