ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ನಾಳೆ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
BIGG NEWS : ಶಿವಮೊಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ : ಅಮೀರ್ ಅಹಮ್ಮದ್ ಸರ್ಕಲ್ನಲ್ಲಿ ಪೊಲೀಸ್ ಕಟ್ಟೆಚ್ಚರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದ್ದು, ಸಮಾವೇಶದ ವೇದಿಕೆಯಲ್ಲಿ ಮೇಲೆ ಸಚಿವರು, ಶಾಸಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಇತರೆ 15 ಕಡೆ ಎಲ್ ಇಡಿ ಸ್ಕ್ರೀನ್ ಅಳವಡಿಕೆ ಮಾಡಲಾಗಿದೆ.
ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶವನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಎಂ.ಟಿ.ಬಿ ನಾಗರಾಜ್, ಮುನಿರತ್ನ ಸೇರಿದಂತೆ ಹಲವು ಸಚಿವರು,ಹಿರಿಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಿದ್ದಾರೆ.
ನಾಳೆ ನಡೆಯಲಿರುವ ಮೊದಲ ಜನಸ್ಪಂದನ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪಾಲ್ಗೊಳ್ಳುತ್ತಿದ್ದಾರೆ. ಮುಂದಿನ ಜನಸ್ಪಂದನ ಸಮಾವೇಶದಲ್ಲಿ ಕೇಂದ್ರದ ಹಿರಿಯ ನಾಯಕರು ಭಾಗವಹಿಸುವ ಸಾಧ್ಯತೆ ಇದೆ.
BIGG NEWS : ಶಿವಮೊಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ : ಅಮೀರ್ ಅಹಮ್ಮದ್ ಸರ್ಕಲ್ನಲ್ಲಿ ಪೊಲೀಸ್ ಕಟ್ಟೆಚ್ಚರ