ಬೆಂಗಳೂರು : ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಡಿಕೇರಿ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿದ್ದು, ಇದಕ್ಕೆ ಬಿಜೆಪಿ ಕೌಂಟರ್ ನೀಡಿದ್ದು, ಆಗಸ್ಟ್ 26 ರಂದೇ ಜಾಗೃತಿ ಸಮಾವೇಶಕ್ಕೆ ಮಡಿಕೇರಿ ಜಿಲ್ಲಾ ಬಿಜೆಪಿ ಘಟಕೆ ಕರೆ ಕೊಟ್ಟಿದೆ.
BIGG NEWS : ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ : ಸಚಿವ ಸುಧಾಕರ್ ವಾಗ್ದಾಳಿ
ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಆಗಸ್ಟ್ 26 ರಂದು ಮಡಿಕೇರಿ ಚಲೋಗೆ ಕರೆ ನೀಡಲಾಗಿದ್ದು, ಕಾಮಗ್ರೆಸ್ ಶಾಸಕಾಂಗ ಪಕ್ಷದಿಂದಲೇ ಮಡಿಕೇರಿ ಚಲೋಗೆ ಕರೆ ನೀಡಲಾಗಿದೆ. ಆಗಸ್ಟ್ 26 ರಂದು ಬೆಳಗ್ಗೆ 10.30 ಕ್ಕೆ ಮಡಿಕೇರಿಯ ಎಸ್ ಪಿ ಕಚೇರಿ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಕಾಂಗ್ರೆಸ್ ನ ಮಡಿಕೇರಿ ಚಲೋ ಕಾರ್ಯಕ್ರಮಕ್ಕೆ ಕೌಂಟರ್ ನೀಡಲು ಸಜ್ಜಾಗಿರುವ ಬಿಜೆಪಿ, ಜನಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ದದ ಹಲವು ಅಂಶಗಳ ಪ್ರಸ್ತಾಪ ಮಾಡಲಾಗಿದೆ. ಸಿದ್ದರಾಮಯ್ಯ ಗೋಮಾಂಸ ಭಕ್ಷಣೆ ಹೇಳಿಕೆ ವಿರುದ್ದವೂ ಜನ ಜಾಗೃತಿ ಮಾಡಲು ಬಿಜೆಪಿ ಕರೆ ನೀಡಿದೆ.