ಹುಬ್ಬಳ್ಳಿ : ಕೇಂದ್ರ ಸಚಿವ ಅಮಿತ್ ಶಾ ನಿನ್ನೆ ಇಡೀ ದಿನ ಸಂಚಲನ ಸೃಷ್ಟಿಸಿದ್ದಾರೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಭಾಗದಲ್ಲಿ ಭಾರತೀಯ ಜನತಾ ಪಾರ್ಟಿ ಗಟ್ಟಿಯಾಗಿದೆ. ನಿನ್ನೆ ದಿನ ಅಮಿತ್ ಶಾ ಮತ್ತಷ್ಟು ಶಕ್ತಿ ತುಂಬಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಗೆ ಬೆಂಬಲ ನೋಡಿ ಕಾಂಗ್ರೆಸ್ ಹತಾಶೆಯಾಗಿದೆ, ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗುತ್ತಿದೆ. ಯಾವತ್ತೂ ಬಳಸದ ಕೀಳುಮಟ್ಟದ ಪದಗಳನ್ನು ಅವರು ಬಳಸುತ್ತಿದ್ದಾರೆ. ನಾನು ಮಾತ್ರ ಸಂಯಮದಿಂದ ಇದ್ದೇನೆ ಎಂದರು.
BIG NEWS : ʻನಾನು ಭಾರತೀಯನೆ, ನನ್ನನ್ನೂ ಹಿಂದೂ ಎಂದು ಕರೆಯಿರಿʼ!: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್