ಧಾರವಾಡ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣದ ಕುರಿತಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದ ಹಿಂದೆ ನಡೆದ ಕೊಲೆಯ ಸೇಡಿಗಾಗಿ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹತ್ಯೆ ಹಿಂದೆ ಕೇರಳದ ಮೂಲ ಇದೆ ಅಂತಾ ಹೇಳಲಾಗುತ್ತಿದೆ. ಇಂಥ ಕ್ರೌರ್ಯವನ್ನು ಹದ್ದುಬಸ್ತಿನಲ್ಲಿಡುವ ಕೆಲಸವಾಗಬೇಕು ಎಂದು ಹೇಳಿದ್ದಾರೆ.
ಹಾಸನದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಬೀದಿ ನಾಯಿಗಳ ಹಾವಳಿ; ಆಟವಾಡುತ್ತಿದ್ದ ಬಾಲಕನಿಗೆ ಕಚ್ಚಿದ ನಾಯಿ
ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳನ್ನು ಹದ್ದುಬಸ್ತಿನಲ್ಲಿ ಇಡದಿದ್ದರೆ ಮತ್ತಷ್ಟು ಹಿಂದೂಗಳ ಬಲಿ ಆಗುತ್ತದೆ.ಮುಲ್ಲಾ, ಮೌಲ್ವಿಗಳು ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳನ್ನು ಹದ್ದುಬಸ್ತಿನಲ್ಲಿಡಬೇಕು.ಇಲ್ಲದಿದ್ದರೆ ಹಿಂದೂ ಸಮಾಜ ತಿರುಗಿ ಬೀಳಲಿದೆ. ಸ್ವಯಂ ರಕ್ಷಣೆಗೆ ಹಿಂದೂ ಸಮಾಜ ಸಿದ್ಧವಾಗಬೇಕಿದೆ. ರಾಜ್ಯ ಸರ್ಕಾರ ಕೂಡಲೇ ಎಸ್ ಡಿಪಿಐ, ಪಿಎಫ್ ಐ ಬ್ಯಾನ್ ಮಾಡಬೇಕು, ಇಲ್ಲವೇ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ಸ್ವಗ್ರಾಮದತ್ತ ಪಾರ್ಥಿವ ಶರೀರ ಮೆರವಣಿಗೆ