ಬೆಂಗಳೂರು : ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿದ್ದು, ಇಂದಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಇಂದಿನಿಂದ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ.
ಬಿಜೆಪಿಯ ಜನಸಂಕಲ್ಪ ಯಾತ್ರೆ ಇಂದಿನಿಂದ ರಾಯಚೂರು ಜಿಲ್ಲೆಯಿಂದ ಆರಂಭಗೊಳ್ಳಲಿದ್ದು, ಯಾತ್ರೆಯು ಡಿಸೆಂಬರ್ 25 ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯಗೊಳ್ಳಲಿದೆ.
BIGG NEWS : ರಾಜ್ಯ ಸರ್ಕಾರದಿಂದ ಖಾಸಗಿ ಅನುದಾನಿತ ಶಾಲೆಗಳ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಹಬ್ಬದ ಮುಂಗಡ ಮಂಜೂರು
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯು ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ಮಾತ್ರವಲ್ಲದೇ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರದಲ್ಲಿಯೂ ಸಂಚರಿಸಲಿದ್ದು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುವುದು. ಜೊತೆಗೆ ಬೃಹತ್ ಸಮಾವೇಶಗಳನ್ನು ಸಹ ಹಮ್ಮಿಕೊಳ್ಳಲಾಗಿದೆ.
ಜನಸಂಕಲ್ಪ ಯಾತ್ರೆಯು ಪ್ರತಿದಿನ ಎರಡು ಕ್ಷೇತ್ರಗಳಂತೆ 50 ಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಸಂಚರಿಸಲಿದೆ. ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಜನಸಂಕಲ್ಪ ಯಾತ್ರೆ ಆರಂಭವಾಗಲಿದ್ದು, ಯಾತ್ರೆಯು ದಿನಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಂತೆ ಸಂಚರಿಸಲಿದೆ.