ಚಿಕ್ಕಮಗಳೂರು: ಇನ್ನು ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹೇಳಿದರ. ಅವರು ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.
‘ಲೋಕಸಭಾ ಕ್ಷೇತ್ರ’ ವ್ಯಾಪ್ತಿ, ನೆರೆಹೊರೆ ಜಿಲ್ಲೆಗೆ ‘ಅಧಿಕಾರಿ’ಗಳನ್ನು ನಿಯೋಜಿಸುವಂತಿಲ್ಲ – ‘ಚುನಾವಣಾ ಆಯೋಗ’ ಆದೇಶ
BIGG NEWS: ನಿರಂತರವಾಗಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ಗುಜರಿಗೆ ಹಾಕಲು ಮುಂದಾದ ರಾಜ್ಯ ಸರ್ಕಾರ!
ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ
‘ಕನ್ನಡ ನಾಮಫಲಕ’ ಬದಲಾಗದಿದ್ದರೆ ‘ಕರ್ನಾಟಕ ಬಂದ್’ – ‘ವಾಟಾಳ್ ನಾಗರಾಜ್’ ಎಚ್ಚರಿಕೆ
ಇದೇ ವೇಳೇ ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ ಎಂದರು. ಇನ್ನೂ ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅದೇ ಅಂತರ ಅಥವಾ ಅದಕ್ಕಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಭವಿಷ್ಯ ನುಡಿದಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಗೊತ್ತಾಗಲಿದೆ. ಬಿಜೆಪಿಯ ಮೊದಲ ಪಟ್ಟಿ ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಬಹುದು ಎಂದು ಭಾವಿಸಿದ್ದೇನೆ ಎಂದರು. ರಾಜ್ಯದಲ್ಲೂ ಕೂಡ ಅದೇ ವಾತಾವರಣವಿದೆ. ಶೋಭಾ ಕರಂದ್ಲಾಜೆ ವಿರುದ್ಧದ ಪಿತೂರಿ ಅದೊಂದು ಷಡ್ಯಂತ್ರ. ಅದನ್ನು ಯಾರು ಮಾಡಿಸುತ್ತಿದ್ದಾರೆ ಎಂಬುದು ಗೊತ್ತಿದೆ ಅಂತ ಹೇಳಿದರು.