ಬೆಂಗಳೂರು : ಇಂದಿನಿಂದ ಮತ್ತೆ ಬಿಜೆಪಿ ನಾಯಕರ ಜನಸಂಕಲ್ಪ ಯಾತ್ರೆ ಆರಂಭವಾಗಲಿದ್ದು, ಇಂದಿನಿಂದ ಮೂರು ದಿನಗಳ ಕಾಲ ಬಿಜೆಪಿ ಜನಸಂಕಲ್ಪ ಯಾತ್ರೆ ನಡೆಯಲಿದೆ.
ಅದ್ರಂತೆ, ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಈ ಜನಸಂಕಲ್ಪ ಯಾತ್ರೆ ನಡೆಯಲಿದೆ.
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಈ ಯಾತ್ರೆಯು ಇಂದು ಉಡುಪಿ ಜಿಲ್ಲೆಯ ಕಾಪು ಹಾಗೂ ಬೈಂದೂರು ವಿಧಾನಸಭೆ ಕ್ಷೇತ್ರಗಳಲ್ಲಿ ಈ ಯಾತ್ರೆ ಸಂಚರಿಸಲಿದೆ.
ಇನ್ನು ಇಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ನವಂಬರ್ 8ರಿಂದ 11ರವರೆಗೆ ಅರುಣ್ ಸಿಂಗ್ ಜನ ಸಂಕಲ್ಪ ಯಾತ್ರೆ ನಡೆಸಲಿದ್ದಾರೆ. ಅದ್ರಂತೆ, ಸಿಂಗ್ ನೇತೃತ್ವದಲ್ಲಿ ಕಲಬುರಗಿ, ಸಿಂದಗಿ, ದಾವಣಗೆರೆ, ತುಮಕೂರಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ.