ಬೆಂಗಳೂರು : ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ನಿಗದಿಯಾಗಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ.
ತಮಿಳುನಾಡು ಕರಾವಳಿ ಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿಯೂ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಬಿಜೆಪಿ ಜನಸಂಕಲ್ಪ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ. ಇಂದು ಗಾಂಧಿನಗರ ಮತ್ತು ಹೆಬ್ಬಾಳ ಕ್ಷೇತ್ರಗಳಲ್ಲಿ ಸಮಾವೇಶ ನಿಗದಿಯಾಗಿತ್ತು. ಆದರೆ ಮಳೆಯಿಂದಾಗಿ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇನ್ನು 2-3 ದಿನಗಳಕಾಲ ಮಳೆ ಇರಲಿದೆ. ಹೀಗಾಗಿ ಮುಂದಿನ ಹವಾಮಾನವನ್ನು ನೋಡಿಕೊಂಡು ಸಮಾವೇಶದ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
Good NEWS : ರಾಜ್ಯದ ಜನತೆಗೆ ಬೆಸ್ಕಾಂನಿಂದ ಭರ್ಜರಿ ಗುಡ್ ನ್ಯೂಸ್ : `ಸೌರ ಗೃಹ ಯೋಜನೆ’ಗೆ ಚಾಲನೆ