ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.
ಬಿಜೆಪಿಯ ಜನಸ್ಪಂದನ ಸಮಾವೇಶದ ಕುರಿತು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ ಕಮಿಷನ್ ಸಮಾವೇಶ, 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಸಿಎಂ ಬಸವರಾಜ ಬೊಮ್ಮಾಯಿ ಅವರೇ ನಿಮ್ಮದೇ ಪಕ್ಷದ ಕಾರ್ಯಕರ್ತ & ಗುತ್ತಿಗೆದಾರ ಸಂತೋಷ್ ಪಾಟೀಲ್ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ?
ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ "ಕಮಿಷನ್ ಸಮಾವೇಶ"
40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ @BSBommai ಅವರೇ?
ನಿಮ್ಮದೇ ಪಕ್ಷದ ಕಾರ್ಯಕರ್ತ & ಗುತ್ತಿಗೆದಾರ ಸಂತೋಷ್ ಪಾಟೀಲ್ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ?#BJPBrashtotsava
— Karnataka Congress (@INCKarnataka) September 10, 2022
ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ? ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರೇ ಬಿಜೆಪಿ ಭ್ರಷ್ಟೋತ್ಸವ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು ಎಂದು ಕಿಡಿಕಾರಿದೆ.
ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ?
ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ.@BSBommai ಅವರೇ, #BJPBrashtotsava ದ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ?
ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು. pic.twitter.com/xJdwjhuS3d
— Karnataka Congress (@INCKarnataka) September 10, 2022
ಗುತ್ತಿಗೆದಾರರು ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪ್ರಧಾನಿಗೆ ಪತ್ರ ಬರೆದರೂ ಪ್ರಯೋಜನವಿಲ್ಲ, ಪತ್ರಿಕಾಗೋಷ್ಠಿ ನಡೆಸಿದರೂ ಉಪಯೋಗವಿಲ್ಲ, 40% ಕಮಿಷನ್ ಲೂಟಿ ನಿಂತೇ ಇಲ್ಲ. ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ? ಎಂದು ಪ್ರಶ್ನಿಸಿದೆ.