ಬೆಂಗಳೂರು : ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಪ್ರಯಾಣಿಕರಿಂದ ಬಿಎಂಟಿಸಿ ಒಂದೇ ತಿಂಗಳಲ್ಲಿ ಲಕ್ಷ ಲಕ್ಷ ರೂ. ದಂಡ ಕಟ್ಟಿಸಿಕೊಂಡಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆಗಸ್ಟ್ನಲ್ಲಿ 2,744 ಪ್ರಯಾಣಿಕರಿಂದ 4.62 ಲಕ್ಷ ರೂಪಾಯಿಗಳನ್ನು ದಂಡದ ಮೂಲಕ ಸಂಗ್ರಹಿಸಿದೆ.
ರಸ್ತೆಯಲ್ಲಿ ಜಗಳವಾಡುತ್ತಿದ್ದ ಯುವಕರಿಗೆ ಡಿಕ್ಕಿ ಹೊಡೆದ ಕಾರು… ಭಯಾನಕ ವಿಡಿಯೋ ವೈರಲ್
ನಗರದಾದ್ಯಂತ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ ಪುರುಷ ಪ್ರಯಾಣಿಕರಿಗೂ ದಂಡ ಕಟ್ಟಿಸಿಕೊಂಡಿದ್ದು, 119 ಪುರುಷ ಪ್ರಯಾಣಿಕರಿಗೆ ಮಹಿಳೆರ ರಿಸರ್ವ್ ಸೀಟ್ ಬಳಕೆ ಮಾಡಿದಕ್ಕಾಗಿ 11,900 ರೂಪಾಯಿಗಳನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94ರ ಪ್ರಕಾರ ದಂಡ ವಿಧಿಸಲಾಗಿದೆ.
2,625 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ ಒಟ್ಟು 4.50 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ. ಟಿಕೆಟ್ ರಹಿತ ಪ್ರಯಾಣಿಕರು ಸಂಚಾರ ಮಾಡುತ್ತಿದ್ದ ಬಸ್ಗಳಲ್ಲಿ ಕರ್ತವ್ಯ ನಿರ್ಲಕ್ಷ್ಯ ಆಧಾರದ ಮೇಲೆ ನಿರ್ವಾಹಕರಗಳ ವಿರುದ್ಧವು ಕೂಡ 1,430 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.