ಬೆಂಗಳೂರು : ಇದೇ ನವೆಂಬರ್ 11 ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಸಮೃದ್ಧಿ ಪ್ರತಿಮೆ ಅನಾವರಣ ಹಾಗೂ ಥೀಮ್ ಪಾರ್ಕ್ ಶಂಕುಸ್ಥಾಪನೆಗೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನೂ ಕರೆಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Rain in Karnataka : ಕರಾವಳಿ, ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕರೆತರುವಂತೆ ಸರ್ಕಾರ ನವೆಂಬರ್ 2 ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಬೆಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ಹೇಳಲಾಗಿದೆ.
ವಿದ್ಯಾರ್ಥಿಗಳನ್ನು ನೇಮಕ ಮಾಡಿರುವ ಬಸ್ ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್ ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದು ಸೂಚಿಸಿದೆ.