ಬೆಳಗಾವಿ : ಬೆಂಗಳೂರಿನಲ್ಲಿ ಟಿ.ಜಾನ್ ವಿಶ್ವವಿದ್ಯಾಲಯ, ದಾವಣಗೆರೆಯಲ್ಲಿ ಜಿ.ಎಂ.ಸಿದ್ದೇಶ್ವರ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ ಆರು ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇಂದು ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.
BIGG NEWS : ಕಾಟಿಪಳ್ಳದಲ್ಲಿ ಜಲೀಲ್ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಬಂಧನ
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದಲ್ಲಿ ಹೊಸದಾಗಿ ಆರು ಖಾಸಗಿ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧ ವಿಧೇಯಕವನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಟಿ.ಜಾನ್ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ, ಸಪ್ತಗಿರಿ ವಿಶ್ವವಿದ್ಯಾಲಯ, ಆಚಾರ್ಯ ವಿಶ್ವವಿದ್ಯಾಲಯ, ದಾವಣಗೆರೆಯಲ್ಲಿ ಜಿ.ಎಂ.ಸಿದ್ದೇಶ್ವರ ವಿಶ್ವವಿದ್ಯಾಲಯ ಮತ್ತು ಬಳ್ಳಾರಿಯಲ್ಲಿ ಕಿಷ್ಕಂದೆ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಣಯಿಸಲಾಗಿದೆ.
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್: 2023ರಲ್ಲಿ ವೆಂಕಟೇಶ್ವರನ ಗರ್ಭಗುಡಿ 8 ತಿಂಗಳ ಕಾಲ ಬಂದ್.?